ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಹಾರಿಸಲಾಗಿರುವ ಮರಾಠಿ ಭಗವಾಧ್ವಜವನ್ನು ತೆಗೆದುಹಾಕುವಂತೆ ಆಗ್ರಹಿಸಿ ಪ್ರವೀಣ್ ಶೆಟ್ಟಿ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಮಹಾನಗರಪಾಲಿಕೆ ಮೇಲೆರಲು ಯತ್ನಿಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದ ಪರಿಣಾಮ ಘರ್ಷಣೆ ನಡೆದಿದೆ.
ಈ ಪ್ರತಿಭಟನೆ ಹಿಂಸಾರೂಪಾ ತಾಳಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಹಲವಾರು ಗಾಯಗೊಂಡಿದ್ದಾರೆ.
ನಗರದಲ್ಲಿ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದಲ್ಲಿ ಮೆರವಣಿಗೆ ಮೂಲಕ ಧ್ವಜ ಕೆಳಗಿಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಆದರೆ ಈ ಕುರಿತು ಕ್ರಮಕೈಗೊಳ್ಳುವಲ್ಲಿ ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿದ ಕರವೇ ಕಾರ್ಯಕರ್ತರು ಸ್ವತಃ ಧ್ವಜ ತೆಗೆಯಲು ಪ್ರಯತ್ನಿಸಿದಾಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಹೊಯ್‌ಕೈ ನಡೆದಿತ್ತು.
ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ತಡೆದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕರವೇ ಬಣದ ಪ್ರವೀಣ್ ಶೆಟ್ಟಿ, ಕರ್ನಾಟಕದಲ್ಲಿ ಮರಾಠಿ ಬಾವುಟ ಹಾರಿಸಿರುವುದಕ್ಕೆ ಸರ್ಕಾರವೂ ಬೆಂಬಲ ನೀಡಿದೆ. ಇದರ ವಿರುದ್ಧ ಕಠಿಣ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. |