ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಸುಗಮ ಸಂಗೀತಗಾರ ಮೈಸೂರು ರಾಜು ಅನಂತಸ್ವಾಮಿ ಶನಿವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಿಡ್ನಿ ವೈಪಲ್ಯದಿಂದ ನರಳುತ್ತಿದ್ದ ಅವರನ್ನು ನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸಾವನ್ನಪ್ಪಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೈಸೂರು ಅನಂತ ಸ್ವಾಮಿ ಅವರ ಪುತ್ರರಾಗಿದ್ದ, ರಾಜು ಅನಂತಸ್ವಾಮಿ ಯುವ ಸುಗಮ ಸಂಗೀತಗಾರರಾಗಿ ಪ್ರಸಿದ್ಧಿ ಪಡೆದಿದ್ದರು. ಅಲ್ಲದೇ ಹಲವಾರ ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಅಭಿನಯಿಸಿದ್ದರು. |