ಹಿಂಸಾಚಾರವಿಲ್ಲದೆ ಸಾರ್ವಜನಿಕ ಸದುದ್ದೇಶಕ್ಕಾಗಿ, ನಾಡು-ನುಡಿ ಮತ್ತು ಕನ್ನಡ ಭಾಷೆ ಉಳಿವಿಗಾಗಿ ಹೋರಾಟ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ಮುಂದಿನ ದಿನಗಳಲ್ಲಿ ಹಿಂತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ವಿ.ಎಸ್.ಆಚಾರ್ಯ ಭರವಸೆ ನೀಡಿದ್ದಾರೆ.
ಅವರು ಶನಿವಾರ ಜೋಯಿಡಾದಲ್ಲಿ ರಾಜ್ಯ ಮಟ್ಟದ ಗಡಿ ಕನ್ನಡಿಗರ ಸಮಾವೇಶದಲ್ಲಿ ಕನ್ನಡ ಹೋರಾಟಗಾರರ ಮನವಿ ಸ್ವೀಕರಿಸಿ ಮಾತನಾಡುತ್ತಿದ್ದರು. ಈ ಸಮಾವೇಶದಲ್ಲಿ ಕೈಗೊಳ್ಳುವ ನಿರ್ಣಯಗಳನ್ನು 8-10ದಿನಗಳ ಒಳಗೆ ತಮಗೆ ಕಳುಹಿಸಿಕೊಟ್ಟರೆ ಅವುಗಳನ್ನು ಆದ್ಯತೆ ಮೇರೆಗೆ ಬಜೆಟ್‌ನಲ್ಲಿ ಮಂಡಿಸಲು ಅನುಕೂಲವಾಗುತ್ತದೆ. ಇದರಿಂದ ಜೋಯಿಡಾಕ್ಕೆ ಮಾತ್ರವಲ್ಲ, ರಾಜ್ಯದ ಎಲ್ಲಾ ಗಡಿ ತಾಲೂಕುಗಳಿಗೆ ಪ್ರಯೋಜನವಾಗಲಿದೆ ಎಂದರು.
ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ, ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ, ರಂಗಕರ್ಮಿ ಕೆ.ವಿ.ನಾಗರಾಜ ಮೂರ್ತಿ,ಮುಖ್ಯಮಂತ್ರಿ ಚಂದ್ರು, ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಭಾಕರ ರಾಣೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. |