ಔರಾದ್‌ನ ಚಿಕಣಿ ಗ್ರಾಮದಿಂದ ದಾಬುಕಾಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದನ್ನು ಎಂಇಎಸ್ ಕಾರ್ಯಕರ್ತರು ತಮ್ಮ ವಶಕ್ಕೆ ತೆಗೆದುಕೊಂಡು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಗಡಿ ವಿವಾದ ಮತ್ತಷ್ಟು ವಿಕೋಪಕ್ಕೆ ಹೋಗುತ್ತಿದ್ದು, ಭಾನುವಾರವಷ್ಟೇ ಲಾತೂರಿನ ಸಮೀಪ ಶಿವಸೇನೆ ಕಾರ್ಯಕರ್ತರು ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗೆ ಬೆಂಕಿ ಹಚ್ಚಿ, ಕೆಲವು ಬಸ್‌ಗಳನ್ನು ಜಖಂಗೊಳಿಸಿದ್ದರು.
ಈ ಎಲ್ಲಾ ಗೊಂದಲಗಳ ನಡುವೆ ಸಂಜೆ ಔರಾದ್‌ನಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಅನ್ನು ಸುಮಾರು 300ಮಂದಿಯ ಎಂಇಎಸ್ ಕಾರ್ಯಕರ್ತರು ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ ಅನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಅಲ್ಲದೇ ತಮ್ಮ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿ, ಬಸ್ ಚಾಲಕನಿಂದ ಡಿಪೋ ಮ್ಯಾನೇಜರ್‌ಗೆ ಮೊಬೈಲ್ ಮುಖೇನ ಸಂದೇಶ ರವಾನಿಸಿರುವು ದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಪ್ರಕರಣ ಔರಾದ್, ಚಿಕಣಿ ಸೇರಿದಂತೆ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿರುವುದಾಗಿ ಸ್ಥಳೀಯರು ಹೇಳಿದ್ದಾರೆ. |