ಪೂನಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಹಾರಾಷ್ಟ್ರದ ಎರಡು ಲಾರಿಗಳಿಗೆ ಗುಂಪೊಂದು ತುಮಕೂರು ಬಳಿ ಸೋಮವಾರ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಗಡಿ ತಕರಾರು ಇದೀಗ ಮತ್ತಷ್ಟು ವಿಕೋಪಕ್ಕೆ ತೆರಳಿದ್ದು, ಇಂದು ಸಂಜೆ ಎರಡು ಲಾರಿಗಳನ್ನು ತಡೆದ ಗುಂಪೊಂದು ಬೆಂಕಿ ಹಚ್ಚಿ ಪರಾರಿಯಾಗಿದೆ. ಲಾರಿಯಲ್ಲಿದ್ದ ಹಣ ಮತ್ತು ಟ್ಯೂಬ್‌ಲೈಟ್‌ಗಳು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದವು. ಆದರೂ ಎರಡೂ ಲಾರಿಗಳು ಶೇ.90ರಷ್ಟು ಸುಟ್ಟು ಹೋಗಿರುವುದಾಗಿ ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ.
ರಾಜ್ಯದ ವಿವಿಧ ಗಡಿಭಾಗದಲ್ಲಿ ಗಡಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
|