ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ವಿಧಾನಸಭೆಗೆ ಆಯ್ಕೆಗೊಂಡಿರುವ ಸಚಿವ ಉಮೇಶ್ ಕತ್ತಿ, ಅನಿತಾ ಕುಮಾರಸ್ವಾಮಿ ಹಾಗೂ ಕಲ್ಪನಾ ಸಿದ್ದರಾಜು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸಭಾ ಅಧ್ಯಕ್ಷ ಜಗದೀಶ್ ಶೆಟ್ಟರ್ ಅವರ ಕೊಠಡಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಈ ಮೂವರು ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಸಭಾಧ್ಯಕ್ಷ ಶೆಟ್ಟರ್ ಮೂವರು ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಅನಿತಾ ಕುಮಾರಸ್ವಾಮಿ ಅವರು ಭಗವಂತನ ಹೆಸರಲ್ಲಿ ಪ್ರಮಾಣವಚನ ಮಾಡಿದರೆ, ಕಲ್ಪನಾ ಸಿದ್ದರಾಜು ಅವರು ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ವಿಶೇಷವಾಗಿತ್ತು.
|