ಮಹಾರಾಷ್ಟ್ರಕ್ಕೆ ತೆರಳುವ ಬಸ್ ಸಂಚಾರವನ್ನು ಮಂಗಳವಾರ ಪುನರಾರಂಭಿಸಿದ್ದು, ಸೂಕ್ತ ಭದ್ರತೆಯನ್ನು ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಭಾನುವಾರ ಮಹಾರಾಷ್ಟ್ರದ ಲಾತೂರಿನಲ್ಲಿ ಕೆಎಸ್‌ಆರ್‌ಟಿಸಿಗೆ ಸೇರಿದ ಬಸ್‌ಗೆ ಬೆಂಕಿ ಹಚ್ಚಿರುವ ಮರಾಠಿಗರು, ಗಡಿಭಾಗದಲ್ಲಿರುವ ಬೀದರ್ ಸಮೀಪದ ದೇವಣಿ ತಾಲೂಕಿನಲ್ಲಿ ಎರಡು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಪರಿಣಾಮವಾಗಿ ರಾಜ್ಯದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್ ಸಂಚಾರವನ್ನು ಸೋಮವಾರ ರದ್ದುಗೊಳಿಸಲಾಗಿತ್ತು.
ಗಡಿಭಾಗವಾದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುತ್ತಿದ್ದು, ಸುಮಾರು 1 ಸಾವಿರ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ರದ್ದು ಪಡಿಸಿದ ಪರಿಣಾಮ ಜನಸಾಮಾನ್ಯರು ಪರದಾಡುವಂತಾಗಿತ್ತು. |