ಮುಂದಿನ ಫೆಬ್ರುವರಿ ಎರಡನೇ ವಾರದಲ್ಲಿ ಪೂರ್ಣ ಪ್ರಮಾಣದ ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ಬಜೆಟ್ ಮಂಡನೆ ಸಂಬಂಧ ಇಂದಿನಿಂದಲೇ ಎಲ್ಲಾ ಇಲಾಖೆಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಪಶುಸಂಗೋಪನೆ, ಮೀನುಗಾರಿಕೆ, ಆರೋಗ್ಯ, ಕುಟುಂಬ ಕಲ್ಯಾಣ, ಕಾರ್ಮಿಕ ಇಲಾಖೆ ಸೇರಿ ವಿವಿಧ ಇಲಾಖೆಗಳ ಸಚಿವರುಗಳು ಅಧಿಕಾರಿಗಳ ಸಭೆಯನ್ನು ನಡೆಸಲಾಗುವುದು ಎಂದರು.
ಬೆಳಗಾವಿಯಲ್ಲಿ ಅಲ್ಲದೇ ಬೆಂಗಳೂರಿಗೆ ತೆರಳಿದ ನಂತರ ಅಲ್ಲಿಯೂ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಿ ಬಜೆಟ್‌ಗೆ ಅಂತಿಮ ರೂಪ ನೀಡಲಾಗುವುದು ಎಂದು ಹೇಳಿದರು. |