ಒಂದೇ ಕುಟುಂಬದ ಮೂವರು ಮಹಿಳೆಯರನ್ನು ಕೊಲೆಗೈದ ಘಟನೆ ನಗರದ ತಿಲಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಜಯನಗರದ ನಿವಾಸಿಗಳಾದ ಸುಭದ್ರಮ್ಮ(80ವ), ಪುತ್ರಿ ಜಯಲಕ್ಷ್ಮಿ (59ವ) ಹಾಗೂ ಸೊಸೆ ವಿಜಯಲಕ್ಷ್ಮಿ (50) ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಏಕಕಾಲದಲ್ಲಿ ಮೂವರು ಮಹಿಳೆಯರನ್ನು ಹತ್ಯೆಗೈಯಲು ಕಾರಣ ಏನೆಂದು ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ತಿಳಿಸಿರುವ ಪೊಲೀಸರು, ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಜಯನಗರ 4ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ವೃದ್ದ ದಂಪತಿಗಳನ್ನು ಕೊಲೆಗೈಯಲಾಗಿತ್ತು. ಈ ಘಟನೆ ನಡೆದ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. |