ಕಳೆದ ವರ್ಷ ವಾಣಿಜ್ಯ ನಗರಿ ಮುಂಬೈಯಲ್ಲಿ ನಡೆದ ಮುಂಬೈ ದಾಳಿಯ ನಂತರ, ಬೆಂಗಳೂರು ಉಗ್ರರ ಗುರಿಯಾಗಿದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ 5ನೇ ದಿನದ ಸಮಾವೇಶದ ಸಂದರ್ಭದಲ್ಲಿ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬೆಂಗಳೂರು ಉಗ್ರರ ಮುಂದಿನ ಗುರಿಯಾಗಿದೆ ಎಂಬ ಗುಪ್ತಚರ ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ಪಡೆದಿರುವುದಾಗಿ ಸದನಕ್ಕೆ ಮಾಹಿತಿ ನೀಡಿದರು.
ಪಾಕಿಸ್ತಾನ ಮತ್ತು ಬಾಂಗ್ಲಾದ ಭಯೋತ್ಪಾದಕರು ಕರ್ನಾಟಕದ ಸೇರಿದಂತೆ ದೇಶದ ವಿವಿಧೆಡೆ ಅಡಗಿಕೊಂಡಿರುವುದಾಗಿ ಹೇಳಿದರು. ಅಲ್ಲದೇ ರಾಜ್ಯಕ್ಕೆ ಭಯೋತ್ಪಾದಕರ ಬೆದರಿಕೆ ಇದ್ದರೂ ಕೂಡ ಕೇಂದ್ರ ಸರ್ಕಾರ ಎನ್‌ಎಸ್‌ಜಿ ಘಟಕವನ್ನು ನೀಡದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ಆ ನೆಲೆಯಲ್ಲಿ ಉದ್ಯಾನನಗರಿ ಜಾಗತಿಕ ಮನ್ನಣೆ ಪಡೆಯುತ್ತಿದೆ ಅಲ್ಲದೇ ಉಗ್ರರ ಬೆದರಿಕೆಯನ್ನೂ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎನ್ಎಸ್‌ಜಿ ಘಟವನ್ನು ಕೂಡಲೇ ಸ್ಥಾಪಿಸಬೇಕೆಂದು ಆಗ್ರಹಿಸಿದರು. |