ವಿಶ್ವವಿಖ್ಯಾತ ಹಂಪಿ ಸಮೀಪದ ಆನೆಗೊಂದಿ ಬಳಿ ನಿರ್ಮಾಣ ಹಂತದಲ್ಲಿದ್ದ ತಳವಾರಘಟ್ಟ ಸೇತುವೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿಯಲ್ಲಿ ಸಿಲುಕಿದ್ದ 26ಮಂದಿಯನ್ನು ರಕ್ಷಿಸಲಾಗಿದ್ದು, ಹಲವರು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದಿದ್ದಾರೆ.
ಆನೆಗೊಂದಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಹ್ಯಾಂಗಿಂಗ್ ಬ್ರಿಡ್ಜ್ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಸುಮಾರು 35 ಮಂದಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿದ್ದು, ಘಟನೆಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿರಬಹುದು ಎಂಬುದು ಖಚಿತಗೊಂಡಿಲ್ಲ ಎಂದಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ನೆರವಿನಿಂದ ಅವಶೇಷಗಳಡಿಯಲ್ಲಿ ಸಿಲುಕಿದವರನ್ನು ಹೊರತೆಗೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ. |