ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಸಿದ್ದರಾಮಯ್ಯನವರು ಕಾಂಗ್ರೆಸ್‌ನಲ್ಲಿಯೇ ಮುಂದುವರಿಯಲಿದ್ದಾರೆ. ಅವರಿಗೆ ಪಕ್ಷದಲ್ಲಿ ಯಾವ ಸ್ಥಾನಮಾನ ಸಿಗಲಿದೆ ಎಂಬುದನ್ನು ನೀವೇ ನೋಡುತ್ತೀರಿ. ಅವರಿಗೆ ರಾಜಕಾರಣದಲ್ಲಿ ಇರುವ ಆಸೆ- ಆಕಾಂಕ್ಷೆಗಳೆಲ್ಲಾ ಕಾಂಗ್ರೆಸ್‌ನಲ್ಲಿಯೇ ಈಡೇರುತ್ತದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಬಿಡಲ್ಲ, ಬಿಜೆಪಿ ಸೇರಲ್ಲ ಎಂದು ಸಿದ್ದರಾಮಯ್ಯನವರು ಹಲವು ಬಾರಿ ತಿಳಿಸಿದ್ದಾರೆ. ಹೀಗಿರುವಾಗ ಮಾಧ್ಯಮದವರು ಸುಮ್ಮನೆ ತಲೆಕೆಡಿಸಿಕೊಳ್ಳುತ್ತಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಬೈರೇಗೌಡ ಸೇರಿದಂತೆ ಪಕ್ಷದ ಹಲವು ಮುಖಂಡರು ಬಿಜೆಪಿ ಹೋಗುತ್ತಾರೆ ಎಂಬುದು ಕೇವಲ ಊಹಾಪೋಹವಷ್ಟೇ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. |