ನಗರದ ಕನಕಪುರ ರಸ್ತೆಯ ದೊಡ್ಡಕಲ್ಲಸಂದ್ರದ ಸಿಂಡಿಕೇಟ್ ಬ್ಯಾಂಕ್ ಸಮೀಪ ಒಂಟಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.
ಸಾವಿಗೀಡಾದ ಮಹಿಳೆಯನ್ನು ರಮಾದೇವಿ(45)ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಆಸ್ತಿಗಾಗಿ ಕೊಲೆ ನಡೆದಿರಬಹುದೆಂದು ಪೊಲೀಸ್ ಮೂಲಗಳು ಶಂಕಿಸಿವೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಜಯನಗರದಲ್ಲಿ ವೃದ್ದ ದಂಪತಿಗಳ ಕೊಲೆ, ಅದರ ಬೆನ್ನಿಗೇ ಮೂವರು ಮಹಿಳೆಯರ ಕೊಲೆ ನಡೆದಿರುವ ಘಟನೆ ಜನರ ನೆನಪಿನಿಂದ ಮಾಸುವೇ ಮುನ್ನವೇ, ಈ ರೀತಿಯಾಗಿ ಕೊಲೆ ನಡೆಯುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಅಲ್ಲದೇ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆಯೂ ವಿಫಲವಾಗುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. |