ಗಣಿ ಹಗರಣ ಕುರಿತು ಹೈಕೋರ್ಟ‌್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಲಾಗುವುದು ಎನ್ನುವ ಮುಖ್ಯಮಂತ್ರಿಗಳ ಹೇಳಿಕೆಗೆ ಲೋಕಾಯುಕ್ತ ಎನ್.ಸಂತೋಷ್ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವುದಾದರೆ ಮಾಡಿಸಲಿ. ಮುಂದೆ ನಾವು ಮಾಡುವುದೇನೂ ಇರುವುದಿಲ್ಲ. ಇಷ್ಟಕ್ಕೂ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿದರೆ ಯಾವ ಆಧಾರದ ಮೇಲೆ ಸತ್ಯ ಹೊರಬರುತ್ತದೆ ಎಂದು ತಿಳಿದಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ-ಆಂಧ್ರ ಗಡಿ ಭಾಗದ ಜಂಟಿ ಸಮೀಕ್ಷೆ ನಡೆಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಆದರೆ ರಾಜ್ಯ ಕಾಂಗ್ರೆಸ್ ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸುತ್ತದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ರಾಜ್ಯ ಕಾಂಗ್ರೆಸ್‌ಗೆ ಅದರ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದರು.
ಶೋಭಾಯಾತ್ರೆ: ಶಿರಾ ಉದ್ವಿಗ್ನ
ಮೆರವಣಿಗೆ ಸಾಗುವ ವೇಲೆ ಎರಡು ಸಮುದಾಯಗಳ ನಡುವೆ ಉಂಟಾದ ಘರ್ಷಣೆಯಿಂದ ಶುಕ್ರವಾರ ತುಮಕೂರಿನ ಶಿರಾದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಘಟನೆಯಲ್ಲಿ ನಾಲ್ಕಾರು ಅಂಗಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ವ್ಯಕ್ತಿಯೊಬ್ಬನಿಗೆ ಇರಿಯಲಾಗಿದೆ.
ಹಿಂದೂ ಜಾಗೃತಿ ವೇದಿಕೆಯ ಮೆರವಣಿಗೆ ಅಲ್ಪಸಂಖ್ಯಾತರೇ ಹೆಚ್ಚಿರುವ ಪ್ರದೇಶದಲ್ಲಿ ಸಾಗುತ್ತಿರುವಾಗ ಈ ಎರಡು ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದೆ. |