ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆನ್ನುವ ಒತ್ತಡ ಪಕ್ಷದಲ್ಲಿ ಹೆಚ್ಚುತ್ತಿದೆ.
ಶಿವಮೊಗ್ಗ ಜಿಲ್ಲೆಯ ಕೆಲವು ಮುಖಂಡರ ನಿಯೋಗವು, ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಅವರನ್ನು ಭೇಟಿಯಾಗಿ ಈ ಕುರಿತು ಒತ್ತಾಯಿಸಿದ್ದಾರೆ.
ಆಹಾರ ಸಚಿವ ಹಾಲಪ್ಪ, ಸಾಗರ ಕ್ಷೇತ್ರದ ಶಾಸಕ ಬೇಲೂರು ಗೋಪಾಲಕೃಷ್ಣ ಮುಂತಾದವರು ನಿಯೋಗದಲ್ಲಿದ್ದರು. ಆಯನೂರು ನಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿರುವುದರಿಂದ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ರಾಘವೇಂದ್ರ ಅವರಿಗೆ ಟಿಕೆಟ್ ನೀಡುವುದರಿಂದ ಅವರ ಗೆಲುವಿನಲ್ಲಿ ಯಡಿಯೂರಪ್ಪ ಅವರ ವರ್ಚಸ್ಸು ಪರಿಣಾಮ ಬೀರುತ್ತದೆ ಎನ್ನುವ ವಾದವನ್ನು ನಿಯೋಗ ಮುಖಂಡರ ಮುಂದಿಟ್ಟಿತು.
ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಯನ್ನು ಬಿಜೆಪಿ ಮುಕ್ತವಾಗಿರಿಸಿಕೊಂಡಿದೆ. ಕಾಂಗ್ರೆಸ್‌ನಿಂದ ಹೊರಬಂದು ಸಿದ್ದರಾಮಯ್ಯ ಪಕ್ಷ ಕಟ್ಟುತ್ತಾರೆ ಎಂಬ ಹಿನ್ನೆಲೆಯಲ್ಲಿ ಇದಕ್ಕೆ ಮಹತ್ವ ಬಂದಿದೆ.
|