ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ ಅವರ ನಿಧನದ ಹಿನ್ನಲೆಯಲ್ಲಿ ಜನವರಿ 29ರಿಂದ ಫೆಬ್ರವರಿ 1ರ ವರೆಗೆ ಜರಗಲಿದ್ದ 75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರವರಿ 4ಕ್ಕೆ ಮುಂದೂಡಲಾಗಿದೆ. ಸಮ್ಮೇಳನ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆಗಳು ಇಲ್ಲವೆಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಆರ್. ಕೆ. ನಲ್ಲೂರು ಪ್ರಸಾದ್ ತಿಳಿಸಿದ್ದಾರೆ. |