ಅಖಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.4ಕ್ಕೆ ಮುಂದೂಡಲಾಗಿದೆ. ಮಾಜಿ ರಾಷ್ಟ್ರಪತಿ ಆರ್.ವೆಂಕಟರಾಮನ್ ಅವರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಸಾಪ ಮೂಲಗಳು ತಿಳಿಸಿವೆ.
ಈ ಮೊದಲು ಸಮ್ಮೇಳನವನ್ನು ಜ.29ರಿಂದ ಫೆ.1ರವರೆಗೆ ಸಾಹಿತ್ಯ ಸಮ್ಮೇಳನ ನಡೆಯಬೇಕಾಗಿತ್ತು. ಇದಕ್ಕಾಗಿ ಎಲ್ಲ ಸಿದ್ದತೆಗಳು ಮುಗಿದಿದ್ದವು. ಆದರೆ, ಮಾಜಿ ರಾಷ್ಟ್ರಪತಿ ವೆಂಕಟರಾಮನ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ಶೋಕಾಚರಣೆ ಘೋಷಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈಗ ಸಮ್ಮೇಳನ ಫೆ.4,5,6,7ರಂದು ನಡೆಯಲಿದೆ. ಗೋಷ್ಠಿ ಮತ್ತಿತರ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಸಾಪ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ತಿಳಿಸಿದ್ದಾರೆ. |