ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಬೇಕೆಂದು ನಿರ್ಧರಿಸಿದ್ದೆ, ಆದರೆ ಕುಟುಂಬ ರಾಜಕಾರಣ ಮಾಡಬಾರದು ಎಂಬ ನೆಲೆಯಲ್ಲಿ ಪುತ್ರನ ಸ್ಪರ್ಧೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ರಾಘವೇಂದ್ರನಿಗೆ ಟೆಕೆಟ್ ನೀಡಬೇಕೆಂದು ಯಡಿಯೂರಪ್ಪ ಅವರು ಒತ್ತಡ ಹೇರಿದ್ದರು. ಅಲ್ಲದೇ ಈ ವಿಷಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಹಾಗೂ ಮುಖ್ಯಮಂತ್ರಿಗಳ ನಡುವೆ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿದೆ ಎಂಬ ಗುಸುಗುಸು ಸುದ್ದಿಯೂ ಹಬ್ಬಿತ್ತು.ಆದರೆ ಅವೆಲ್ಲ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ತಮ್ಮ ಪುತ್ರ ಲೋಕಸಭೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ ಅವರು, ತಾನು ಕುಟುಂಬ ರಾಜಕಾರಣ ಮಾಡಲಾರೆ ಎಂಬುದಾಗಿಯೂ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ. |