ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂಬ ಅತೃಪ್ತಿಯಲ್ಲಿರುವ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ನಡುವಿನ ಮಾತುಕತೆ ಬಹುತೇಕ ಯಶಸ್ವಿಯಾಗಿದ್ದು, ಸದ್ಯದಲ್ಲಿಯೇ ಸಿದ್ದುಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಗರಿಗೆ ಟಿಕೆಟ್, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಸಿದ್ದರಾಮಯ್ಯ ಮನವೊಲಿಸಲು ಕಾಂಗ್ರೆಸ್ ಮುಂದಾಗಿದೆ.
ಮತ್ತೊಂದು ಮೂಲದ ಪ್ರಕಾರ, ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಿ ಪಕ್ಷದಲ್ಲಿಯೇ ಉಳಿಸಿಕೊಳ್ಳುವ ನಿರ್ಧಾರಕ್ಕೆ ಸೋನಿಯಾ ಬಂದಿದ್ದಾರೆ ಎಂಬ ಮಾತು ಕೂಡಾ ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿದೆ.
ನಾಲ್ಕು ತಿಂಗಳ ಹಿಂದಷ್ಟೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ಆರ್.ವಿ.ದೇಶಪಾಂಡೆ ಅವರ ತಲೆದಂಡವಾಗುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಸೋನಿಯಾಗಾಂಧಿ ಗಾಂಧಿ, ಪೃಥ್ವಿರಾಜ್ ಚೌಹಾಣ್ ಹಾಗೂ ಇತರ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ. |