ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗೆ ಅನುಗುಣವಾಗಿ ನಡೆದುಕೊಳ್ಳುವಂತೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅನೇಕ ಮುಖಂಡರಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ಶನಿವಾರ ಸಿದ್ದರಾಮಯ್ಯ, ಜಾಲಪ್ಪ, ಇಬ್ರಾಹಿಂ, ಮಹಾದೇವ ಪ್ರಸಾದ್ ಹಾಗೂ ಮಲ್ಲಿಕಾರ್ಜುನ ಕರ್ಗೆ ಅವರೊಂದಿಗೆ ಸೋನಿಯಾ ಗಾಂಧಿ ಸಮಾಕೋಚನೆ ನಡೆಸಿ ಈ ಸೂಚನೆ ನೀಡಿದ್ದು, ಇದನ್ನು ಪಕ್ಷದ ಎಲ್ಲ ಮುಖಂಡರು ಒಪ್ಪಿದ್ದಾರೆ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಹೈಕಮಾಂಡ್‌ನಿಂದ ಯಾವುದೇ ನಿರ್ದೇಶನ ಬಂದಿಲ್ಲ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ 20 ಸೀಟುಗಳನ್ನು ಗಳಿಸುತ್ತವೆ ಎಂಬ ವಿಶ್ವಾಸ ನನಗಿದೆ ಎಂದರು.
|