ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ 14-15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಚಂದ್ರಗ್ರಹಣದ ನಂತರ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಶಾಸಕರು ಮತ್ತು ಮಾಜಿ ಸಚಿವರು ಸ್ಪರ್ಧಿಸಲಿದ್ದು, ಅಗತ್ಯ ಬಿದ್ದರೆ ತಾವು ಕೂಡ ಸ್ಪರ್ಧಿಸುವುದಾಗಿ ಅವರು ಹೇಳಿದರು.
ಲೋಸಭಾ ಚುನಾವಣೆಗೆ ಮೊದಲ ಹಂತದಲ್ಲಿ ಅಖೈರುಗೊಳಿಸಿರುವ ಅಭ್ಯರ್ಥಿಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದು, ಶುಭದಿನದಂದು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು. |