ಕೊಡಗಿನ ಗೋಣಿಕೊಪ್ಪಲಿನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್‌ಗೆ ವಿರಾಜಪೇಟೆ ಸತ್ರ ನ್ಯಾಯಾಲಯ ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಮಡಿಕೇರಿಯ ಗೋಣಿಕೊಪ್ಪಲಿನಲ್ಲಿ 2003ರಲ್ಲಿ ನಡೆದ ಹಿಂದೂ ಸಮಾಜೋತ್ಸವದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮುತಾಲಿಕ್ ಅವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಸೋಮವಾರ ಪೊಲೀಸರು ವಿರಾಜಪೇಟೆಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಇದಕ್ಕೂ ಮುನ್ನ ದಾವಣಗೆರೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬೆಳಗಾವಿಯಲ್ಲಿ ಬಂಧಿಸಿ, ದಾವಣಗೆರೆಗೆ ಕರೆತರಲಾಗಿತ್ತು, ಅಲ್ಲಿಂದ ಜಾಮೀನು ಪಡೆದು ಹೊರಬಂದ ಮುತಾಲಿಕ್‌ರನ್ನು ಮಂಗಳೂರು ಪೊಲೀಸರು ಪಬ್ ದಾಳಿ ಪ್ರಕರಣದಲ್ಲಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.
ಮಂಗಳೂರು 3ನೇ ಜೆಎಂಎಫ್‌ಸಿ ನ್ಯಾಯಾಲಯ ಮುತಾಲಿಕ್‌ಗೆ ಷರತ್ತು ಬದ್ದ ಜಾಮೀನು ನೀಡಿತ್ತು. ಆದರೆ ಗೋಣಿಕೊಪ್ಪಲಿನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಮತ್ತೆ ಬಂಧಿಸಿದ್ದರು. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಜಾಮೀನು ನೀಡಿದೆ. |