ಯುವಜನತೆಯ ಮನಸ್ಸಿನಲ್ಲಿ ಫ್ಯಾಸಿಸ್ಟ್ ಮನೋಭಾವವನ್ನು ಬೆಳೆಸಲು ಹೊರಟಿರುವ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಎಬಿವಿಪಿ ಕಾರ್ಯಕರ್ತರು ನಿಜವಾದ ಉಗ್ರರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಭಯೋತ್ಪಾದನೆ ವಿರುದ್ಧ ಜನಜಾಗೃತಿ ಜಾಥಾ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ವಿದ್ಯಾರ್ಥಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಭಯೋತ್ಪಾದನೆ ವಿರುದ್ಧ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನೆವದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪಕ್ಷದ ಮತ್ತು ಸಂಘಪರಿವಾರದ ತತ್ವಗಳನ್ನು ಬೋಧಿಸುವ ಸಂಚು ನಡೆಸಿದೆ ಎಂದು ದೂರಿದರು.ಪಕ್ಷದ ಅಜೆಂಡಾವನ್ನು ವ್ಯವಸ್ಥಿತವಾಗಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ತುಂಬುವ ಕೃತ್ಯ ಅಪರಾಧ, ಇದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು. |