ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿರುವ ಭಯೋತ್ಪಾದನಾ ವಿರೋಧಿ ಜಾಗೃತಿ ಅಭಿಯಾನಕ್ಕೆ ಅಡ್ಡಿಪಡಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಬುಧವಾರ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಸೆಂಟ್ರಲ್ ಕಾಲೇಜು ಆವರಣದೊಳಕ್ಕೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ, ಲಾಠಿ ಪ್ರಹಾರ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ 20ಮಂದಿಯನ್ನು ಬಂಧಿಸಲಾಗಿದೆ.
ಆಡಳಿತಾರೂಢ ಬಿಜೆಪಿ ಸರ್ಕಾರ ಶಿಕ್ಷಣದಲ್ಲಿ ಕೇಸರೀಕರಣ ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಯುವಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವ ಲಾಠಿಪ್ರಹಾರವನ್ನು ಖಂಡಿಸಿದ್ದು, ಏನೇ ಆದರೂ ಬಿಜೆಪಿ ಅಜೆಂಡಾವನ್ನು ಜಾರಿಗೊಳಿಸಲು ತಾವು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. |