ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ದಿ ಕಾರ್ಯವನ್ನು ಮೆಚ್ಚಿ ತಾವು ಬಿಜೆಪಿ ಸೇರಿದ್ದಾಗಿ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ದೇಶ ಇಂದು ಬಿಕ್ಕಟ್ಟು ಎದುರಿಸುತ್ತಿದೆ. ಭಯೋತ್ಪಾದನೆ ದೇಶವನ್ನು ಕಾಡುತ್ತಿರುವ ದೊಡ್ಡ ಸಮಸ್ಯೆ. ಇದನ್ನು ನಿವಾರಿಸುವ ದಿಸೆಯಲ್ಲಿ ಬಿಜೆಪಿ ನಿಲುವು ತಮಗೆ ಮೆಚ್ಚುಗೆಯಾಗಿದೆ. ಎಲ್.ಕೆ.ಆಡ್ವಾಣಿ ಅವರ ಬಗ್ಗೆ ಅಪಾರ ಗೌರವವಿದೆ ಎಂದು ನಾಗಮಾರಪಲ್ಲಿ ತಾವು ಬಿಜೆಪಿ ಸೇರಿದ್ದಕ್ಕೆ ಸಮರ್ಥನೆ ನೀಡಿದ್ದಾರೆ.
ತಾವು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಿಡುವುದು ಬಿಜೆಪಿ ವರಿಷ್ಠರಿಗೆ ಬಿಟ್ಟ ವಿಚಾರ. ಯಾವುದೇ ಆಸೆ ಆಮಿಷಗಳಿಂದ ನಾನು ಬಿಜೆಪಿ ಸೇರಿಲ್ಲ ಎಂದ ಅವರು, ಸದ್ಯದಲ್ಲಿಯೇ ಬೀದರ್‌ನಲ್ಲಿ ಬೃಹತ್ ಸಮಾರಂಭ ಆಯೋಜಿಸಿ ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ಅವರು ಹೇಳಿದರು.
ಭಯೋತ್ಪಾದನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಡ್ವಾಣಿ ನೇತೃತ್ವದ ಸುಭದ್ರ ಬಿಜೆಪಿ ಸರ್ಕಾರ ರಚನೆಯಾಗುವ ಅಗತ್ಯವಿದೆ ಎನ್ನುವ ಮನವರಿಕೆಯಿಂದ ಹಲವರು ಬಿಜೆಪಿ ಸೇರುತ್ತಿದ್ದಾರೆ. ಇದು ಆಪರೇಷನ್ ಕಮಲ ಅಲ್ಲ. ನಾಗಮಾರಪಲ್ಲಿ ಸ್ವಂತ ಇಚ್ಚೆಯಿಂದ ಬಿಜೆಪಿ ಸೇರಿದ್ದಾರೆ ಎಂದು ಸಚಿವ ಆರ್.ಅಶೋಕ್ ಹೇಳಿದರು.
|