ದೇವನಹಳ್ಳಿ ತಾಲೂಕಿನ ಸುಮಾರು ಎಂಟು ಮರಳು ಫಿಲ್ಟರ್ ಘಟಕಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮರಳು ಫಿಲ್ಟರ್‌ಗೆ ಬಳಸುತ್ತಿದ್ದ ಐದು ಟ್ರ್ಯಾಕ್ಟರ್, ಐದು ಜೆಸಿಬಿ ಯಂತ್ರಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಲೋಕಾಯುಕ್ತದ 50 ಮಂದಿ ಪೊಲೀಸರು ಏಳು ತಂಡಗಳಲ್ಲಿ ದೇವನಹಳ್ಳಿ ತಾಲೂಕಿನ ಎಂಟು ಪ್ರದೇಶದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಅಕ್ರಮ ಮರಳು ದಂಧೆಯ ಜಾಲವನ್ನು ಪತ್ತೆ ಮಾಡಿದ್ದಾರೆ.
ಭೂ ರಹಿತರಿಗೆ ಸರ್ಕಾರ ಸಾಗುವಳಿ ನಡೆಸಲು ನೀಡಿದ್ದ ಭೂಮಿಯಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಕೆಲಸ ವ್ಯಾಪಕವಾಗಿ ನಡೆಯುತ್ತಿದೆ ಎಂದು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ತಹಸೀಲ್ದಾರ್, ಪೊಲೀಸರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಈ ವಿಷಯ ಗೊತ್ತಿದ್ದೂನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದರು.
|