ಭಯೋತ್ಪಾದನೆ ವಿರೋಧಿ ಆಂದೋಲನವನ್ನು ಯಾರೋ ಕೆಲವು ಪುಂಡರು ವಿರೋಧಿಸುತ್ತಾರೆ ಎಂಬ ಕಾರಣಕ್ಕೆ ನಾವು ಅದನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಇದು ಬಿಜೆಪಿಯ ಭಯೋತ್ಪಾದನಾ ವಿರೋಧಿ ಆಂದೋಲನಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಲಿಂಬಾವಳಿ ಅವರು ನೀಡಿದ ಹೇಳಿಕೆ. ಈ ಆಂದೋಲನದ ಮೂಲಕ ಕಾಲೇಜು, ವಿಶ್ವವಿದ್ಯಾಲಯವನ್ನು ಬಿಜೆಪಿ ಕೇಸರೀಕರಣ ಮಾಡಲು ಹೊರಟಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಲಿಂಬಾವಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವರು ಈ ಆಂದೋಲನವನ್ನು ವಿರೋಧಿಸುವುದಕ್ಕಾಗಿಯೋ ವಿರೋಧಿಸುತ್ತಿದ್ದಾರೆ. ಅವರ ವಿರೋಧಕ್ಕೆ ಯಾವುದೇ ಕಾರಣವಿಲ್ಲ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕರು ಭಾಗವಹಿಸಿದ್ದರು. ನಾವು ಯಾವತ್ತೂ ಶಿಷ್ಟಾಚಾರ ಉಲ್ಲಂಘಿಸಿಲ್ಲ ಎಂದರು.
ಆಂದೋಲನವನ್ನು ವಿರೋಧ ಮಾಡುವ ಡಿ.ಕೆ.ಶಿವಕುಮಾರ್ ಅವರು ಅಫ್ಜಲ್ ಗುರುವನ್ನು ನೇಣಿಗೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ ಎಂದು ಆಗ್ರಹಿಸಿದರು. |