ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದ ವಸ್ತುಗಳ ಮಾರಾಟ ಮಾಡುವವರಿಗೆ ಮತ್ತು ಕ್ಲಬ್, ಪಬ್ ಮಾಲೀಕರಿಗೆ ಯಾರಾದರು ಬೆದರಿಸಿದರೆ ಸ್ಥಳೀಯ ಠಾಣೆಗೆ ದೂರು ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮೀಷನರ್ ಶಂಕರ್ ಬಿದರಿ ಎಚ್ಚರಿಕೆ ನೀಡಿದರು.
ಫೆ.14ರಂದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗುತ್ತದೆ. ಯಾರೂ ಭಯಪಡಬೇಕಾಗಿಲ್ಲ ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬ ನಾಗರಿಕರು ಕಾನೂನಿನ ಚೌಕಟ್ಟಿನಲ್ಲಿ ತಮಗೆ ಇಷ್ಟ ಬಂದ ಸಂಸ್ಕೃತಿ ಆಚರಣೆಗೆ ಅವಕಾಶ ಇದೆ. ಇದಕ್ಕೆ ಅಡ್ಡಿ ಪಡಿಸುವುದು ಅಪರಾಧವಾಗಿದೆ. ಆದ್ದರಿಂದ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ಹೇಳಿದರು. |