ಲೋಕಸಭಾ ಚುನಾವಣೆಗೆ ಬಿಜೆಪಿಯ ರಾಷ್ಟ್ತ್ರೀಯ ಉಪಾಧ್ಯಕ್ಷ ವೆಂಕಯ್ಯ ನಾಯ್ಡು ಅವರನ್ನು ರಾಜ್ಯದ ಉಸ್ತುವಾರಿಯಾಗಿ ನೇಮಿಸಲಾಗಿದೆ.
ಅಲ್ಲದೆ, ಪಕ್ಷದ ಮತ್ತೊಬ್ಬ ರಾಷ್ಟ್ತ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರೂ ಸಹ ರಾಜ್ಯ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಲಿದ್ದು, ಮಧ್ಯ ಪ್ರದೇಶದ ಹೊಣೆಯನ್ನು ಅವರಿಗೆ ನೀಡಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿದ ವೆಂಕಯ್ಯ ನಾಯ್ಡು ಅವರಿಗೆ ರಾಜ್ಯದ ಉಸ್ತುವಾರಿ ವಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭಾ ಚುನಾವಣೆಗೆ ಸರ್ವ ಸನ್ನದವಾಗಿರುವ ಬಿಜೆಪಿ ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಬಲ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಗೆ ಹೆಚ್ಚಿನ ಮಹತ್ವ ಬಂದಿದೆ.
ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಹೊಂದಿರುವ ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. |