ರಾಜ್ಯದ ಹಿಂದುಳಿದ ತಾಲೂಕುಗಳ ಅಭಿವೃದ್ದಿಗೆಂದು ಡಾ.ನಂಜುಂಡಪ್ಪ ವರದಿ ಪ್ರಕಾರ ಸಾವಿರಾರು ಕೋಟಿ ರೂ.ಹಣ ನಿಗದಿಗೊಳಿಸಿದ್ದು, ಅದು ಸರಿಯಾಗಿ ಖರ್ಚಾಗುತ್ತಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದೆ. ಅದಕ್ಕೆ ಪ್ರತ್ಯೇಕ ಲೆಕ್ಕ ಖಾತೆಯನ್ನು ತೆರೆಯಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಹಿಂದುಳಿದ ಭಾಗದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು.
ಕಲ್ಬುರ್ಗಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಆದಷ್ಟು ಶೀಘ್ರ ಜಾರಿಗೆ ತರಲಾಗುವುದು ಎಂದ ಅವರು, ಯಾದಗಿರಿ ಜಿಲ್ಲೆಯಾಗಿ ಪರಿವರ್ತಿಸುವ ನಿರ್ಣಯಕ್ಕೆ ಸರ್ಕಾರ ಬದ್ದವಾಗಿದೆ. ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಹಣ ನಿಗದಿಗೊಳಿಸಲಾಗುವುದು ಎೆದು ತಿಳಿಸಿದರು.
ಮುಂದಿನ 5ವರ್ಷಗಳಲ್ಲಿ ವಿದ್ಯುತ್ ಬರ ನೀಗಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು. |