ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮಂಗಳೂರು ತಾಲಿಬಾನ್ ಆಗಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಣುಕಾ ಚೌಧುರಿ ವಿರುದ್ಧ ಮಂಗಳೂರು ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಮಂಗಳೂರಿನ ಮೇಯರ್ ಮೊದಲ್ಗೊಂಡು ಪ್ರಮುಖರ ಪರವಾಗಿ ನ್ಯಾಯವಾದಿ ಪಿ.ಪಿ. ಹೆಗ್ಡೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ನೀಡಿದ ಮೂರು ದಿನಗಳೊಳಗಾಗಿ ಹೇಳಿಕೆಯನ್ನು ಹಿಂಪಡೆಯಬೇಕು ಅಥವಾ ಸಾರ್ವಜನಿಕವಾಗಿ ಕ್ಷಮೆ ಯಾಚನೆ ಮಾಡಬೇಕು. ಇಲ್ಲವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಪಿ.ಪಿ. ಹೆಗ್ಡೆ ತಿಳಿಸಿದ್ದಾರೆ.
ಮಂಗಳೂರು ತಾಲಿಬಾನ್ ಎಂದು ಹೇಳುವುದು ಸರಿಯಲ್ಲ. ಮಂಗಳೂರಿನಲ್ಲಿ ಹಿಂದು ಹುಡುಗಿ ಮುಸ್ಲಿಂ ಹುಡುಗನೊಂದಿಗೆ ಮಾತನಾಡುವಂತಿಲ್ಲ ಎಂಬ ಹೇಳಿಕೆ ತಪ್ಪು. ಯಾವುದೋ ಒಂದೆರಡು ಘಟನೆಗಳಿಗೆ ಇಡೀ ಮಂಗಳೂರಿಗರೇ ಭಯೋತ್ಪಾದಕರು ಎಂಬಂತೆ ಬಿಂಬಿಸುವುದು ಸರಿಯಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. |