ಗುಜರಾತ್ ರಾಜ್ಯದಿಂದ 200 ಮೆಗಾವ್ಯಾಟ್ ವಿದ್ಯುತನ್ನು ಖರೀದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ನಗರದಲ್ಲಿಂದು ಸಾಗರ್ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಕೊರತೆ ಬಾರದಂತೆ ನೆರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಲಾಗುವುದು ಎಂದರು.
500ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಬಳ್ಳಾರಿಯ ಶಾಖೋತ್ಪನ್ನ ವಿದ್ಯುತ್ ಘಟಕ ಸ್ಥಗಿತಕೊಂಡಿರುವ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿಯವರು, 200ಮೆಗಾವ್ಯಾಟ್ ವಿದ್ಯುತ್ ಖರೀದಿ ಸಂಬಂಧ ಗುಜರಾತ್ ರಾಜ್ಯದ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು ತಿಳಿಸಿದರು. |