ಹೊಸದಾಗಿ ಬಾರ್ ಮತ್ತು ವೈನ್‌ಸ್ಟೋರ್‌ಗಳ ಪ್ರಾರಂಭಕ್ಕೆ ಅನುಮತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅಬಕಾರಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ.ಈಗಾಗಲೇ ಲೈಸೆನ್ಸ್ ಪಡೆದಿರುವ 400ಮಂದಿ ಅದನ್ನು ಉಪಯೋಗಿಸಿಕೊಂಡಿಲ್ಲ, ಈ ಬಗ್ಗೆ ಮುಂದೇನು ಮಾಡಬಹುದೆಂಬ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದರು.ಬೆಂಗಳೂರು ವರದಿಗಾರರ ಕೂಟ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಬ್‌ಗಳನ್ನು ಕಾನೂನು ಬಾಹಿರವಾಗಿ ತೆರೆಯಲು ಅವಕಾಶ ನೀಡಿಲ್ಲ ಎಂದು ತಿಳಿಸಿದರು.ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅಬಕಾರಿ ಇಲಾಖೆ ಹಮ್ಮಿಕೊಂಡಿರುವ ಗುರಿಯಂತೆ 5,600 ಕೋಟಿ ರೂ.ಗಳಿಗೂ ಅಧಿಕ ಆದಾಯ ಸಂಗ್ರಹವಾಗಲಿದೆ. ನಿಗದಿತ ಗುರಿಗಿಂತ ಸುಮಾರು ಒಂದು ಸಾವಿರ ಕೋಟಿ ರೂ. ಆದಾಯ ಹೆಚ್ಚಾಗಲಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. |