ವಿಮಾನ ನಿಲ್ದಾಣಕ್ಕೆ ಭೂಮಿಯನ್ನು ವಶಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ಖಂಡಿಸಿ ಭಾನುವಾರ ಗಾಜನೂರು ಮತ್ತು ಶಿರವಾಡ ರೈತರು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪರಿಸ್ಥಿತಿ ಕೈಮೀರಿದ ಪರಿಣಾಮ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗಿಸಿದ ಘಟನೆ ನಡೆದಿದೆ.
ರೈತರು ಮತ್ತು ಪೊಲೀಸರೊಂದಿಗೆ ನಡೆದ ವಾಗ್ವಾದದಲ್ಲಿ ರೈತರು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರೂ ಗಾಯಗೊಂಡಿದ್ದಾರೆ. ಆಡಳಿತಾರೂಢ ಬಿಜೆಪಿ ಸರ್ಕಾರ ರಾಜ್ಯದ ಪ್ರಮುಖ ನಗರಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣಕ್ಕೆ ಸರ್ಕಾರ ಪೂರ್ಣ ತಯಾರಿ ನಡೆಸಿದ್ದು, ಭೂಮಿ ಸ್ವಾಧೀನ ಪ್ರಕ್ರಿಯೆಗೆ ಮುಂದಾಗಿದೆ. ಆದರೆ ಶಿರವಾರ ಮತ್ತು ಗಾಜನೂರು ರೈತರು ತಮ್ಮ ಭೂಮಿಯನ್ನು ವಿಮಾನ ನಿಲ್ದಾಣ ನಿರ್ಮಾಣಕ್ಕೆ ನೀಡಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿದಾರೆ.
ಯಾವ ಕಾರಣಕ್ಕೂ ಭೂಮಿ ವಶಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಲಾಠಿ ಪ್ರಹಾರಕ್ಕೆ ಎಡೆಮಾಡಿಕೊಟ್ಟಿತು. |