ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಲೋಕಸಭೆಗೆ ಸ್ಪರ್ಧೆ ಇಲ್ಲ: ಕೃಷ್ಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲೋಕಸಭೆಗೆ ಸ್ಪರ್ಧೆ ಇಲ್ಲ: ಕೃಷ್ಣ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಸಭಾ ಸದಸ್ಯ ಎಸ್.ಎಂ. ಕೃಷ್ಣ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆ ತಮಗಿಲ್ಲ. ಈ ಬಗ್ಗೆ ಹೈಕಮಾಂಡ್‌ನಿಂದ ಇದುವರೆಗೆ ಯಾವುದೇ ಸೂಚನೆಯೂ ಬಂದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ 28 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸುವುದು ಕೆಪಿಸಿಸಿಗೆ ಬಿಟ್ಟಿದ್ದು. ಅದನ್ನು ಪಕ್ಷದ ವರಿಷ್ಠರು ಅಂತಿಮಗೊಳಿಸುತ್ತಾರೆ. ಮಂಡ್ಯ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸಲು ನನಗೆ ಆಸಕ್ತಿಯಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಕಾಂಗ್ರೆಸ್ಸಿಗಿಲ್ಲ. ಕಾಂಗ್ರೆಸ್ಸಿಗೆ ತನ್ನದೇ ಆದ ಶಕ್ತಿಯಿದೆ. ಅದರ ಆಧಾರದ ಮೇಲೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ವಿಶ್ವಾಸ ತಮಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ರೈಲ್ವೆ ಬಜೆಟ್ ಕುರಿತು ಮಾತನಾಡಿದ ಅವರು, ರೈಲ್ವೆ ಬಜೆಟ್‌‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಇದು ಮುಂದಿನ ಲೋಕಸಭಾ ಚುನಾವಣೆಗೆ ಪರಿಣಾಮ ಬೀರುವ ಅಂಶವಾಗಿದೆ. ಈ ಬಗ್ಗೆ ಸ್ವತಃ ರೈಲ್ವೆ ಸಚಿವ ಲಾಲೂ ಪ್ರಸಾದ್ ಅವರೇ ಸರಿಪಡಿಸಬೇಕಿದೆ. ಕಾಂಗ್ರೆಸ್ ಐದು ವರ್ಷಗಳ ಸ್ಥಿರ ಆಡಳಿತ ನೀಡಿದೆ. ಸೋನಿಯಾ ಮತ್ತು ಮನಮೋಹನ್ ಸಿಂಗ್ ನಾಯಕತ್ವ ಹಾಗೂ ಸರ್ಕಾರದ ಅಭಿವೃದ್ದಿ ಕಾರ್ಯವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದಾಗಿ ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸರ್ಕಾರ ಮೊಸಳೆ ಕಣ್ಣೀರು ಹಾಕುತ್ತಿದೆ: ಉಗ್ರಪ್ಪ
ಬೆಂಗಳೂರು: 14 ಕುಖ್ಯಾತ ರೌಡಿಗಳ ಬಂಧನ
ಬೆಂಗಳೂರು: ದಂಪತಿ-ಮಗನ ಬರ್ಬರ ಹತ್ಯೆ
ರೈಲ್ವೇ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಒಪ್ಪಿದ ಕೃಷ್ಣ
25ರಂದು ಕಾಂಗ್ರೆಸ್ ಮೊದಲ ಪಟ್ಟಿ
ವೈಮಾನಿಕ ಪ್ರದರ್ಶನ: ಎಫ್-16 ಟಯರ್ ಸ್ಫೋಟ