ಮೈಸೂರು ಪಾಲಿಕೆಯ ಮೇಯರ್ - ಉಪಮೇಯರ್ ಆಯ್ಕೆಯ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ದಾಂಧಲೆ ನಡೆಸುವ ಮೂಲಕ ಪಾಲಿಕೆ ರಣರಂಗವಾಗಿ ಮಾರ್ಪಟ್ಟಿದೆ.
65 ಸದಸ್ಯ ಬಲ ಹೊಂದಿರುವ ಮೈಸೂರು ಪಾಲಿಕೆಯ ಮೇಯರ್-ಉಪಮೇಯರ್ ಆಯ್ಕೆಗಾಗಿ ಗುರುವಾರ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಅಧಿಕಾರದ ಗದ್ದುಗೆ ಏರುವ ಕನಸು ಕಂಡಿದ್ದರೆ, ಮತ್ತೊಂದೆಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಯೊಂದಿಗೆ ಪಾಲಿಕೆಯನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹವಣಿಸಿದ್ದವು.
ಏತನ್ಮಧ್ಯೆ ಪಕ್ಷೇತರ ಸದಸ್ಯರನ್ನು ಕಾಂಗ್ರೆಸ್ ಮುಖಂಡರು ಅಪಹರಿಸುವ ಯತ್ನಕ್ಕೆ ಮುಂದಾದಾಗ ಬಿಜೆಪಿ ಸದಸ್ಯರು ತಡೆದಿದ್ದರು. ಆ ಸಂದರ್ಭದಲ್ಲಿ ನಡೆದ ಘರ್ಷಣೆಯಲ್ಲಿ ಹಲವು ಸದಸ್ಯರು ಗಾಯಗೊಂಡಿದ್ದಾರೆ. ಉದ್ರಿಕ್ತ ಕಾಂಗ್ರೆಸ್ ಮುಖಂಡರು ಪೀಠೋಪಕರಣಗಳನ್ನು ಧ್ವಂಸಗೊಳಿಸುವ ಮೂಲಕ ಪಾಲಿಕೆ ರಣರಂಗವಾಗಿ ಮಾರ್ಪಟ್ಟಿದೆ.
ಯಾವುದೇ ಕಾರಣಕ್ಕೂ ಚುನಾವಣೆ ಪ್ರಕ್ರಿಯೆ ಮುಂದುವರಿಯಲು ಬಿಡುವುದಿಲ್ಲ ಎಂದು ಬಿಜೆಪಿ ಪಟ್ಟ ಹಿಡಿದಿದೆ. |