ಎರಡು ವರ್ಷಗಳ ಹಿಂದೆ ಚಿತ್ರನಟಿ ರಾಧಿಕಾ ಮನೆ ದಾಳಿ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯಿಸುವ ಮೂಲಕ ಮತ್ತೆ ಮರುಜೀವ ಪಡೆದುಕೊಂಡಿದೆ.ಚಿತ್ರವೊಂದಕ್ಕೆ 3ರಿಂದ5ಲಕ್ಷ ರೂ. ಸಂಭಾವನೆ ಪಡೆಯುವ ರಾಧಿಕಾ ಅವರಿಗೆ ಕೋಟಿಗಟ್ಟಲೆ ಹಣ ಯಾವ ಮೂಲದಿಂದ ಬರುತ್ತಿದೆ ಎಂಬುದರ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಜೆಡಿಯು ಕಾರ್ಯದರ್ಶಿ ಮಲ್ಲಿಕಾರ್ಜುನಸ್ವಾಮಿ ಹಿರೇಮಠ್ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.ಈಗಾಗಲೇ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ, ರಾಧಿಕಾ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ಅಥವಾ ಕೇಂದ್ರ ಜಾಗೃತ ದಳ ತನಿಖೆಗೆ ಆದೇಶಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವಂತೆ ಅವರು ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.ತಮ್ಮ ಮನವಿಯನ್ನು ರಾಜ್ಯಪಾಲರು ನಿರ್ಲಕ್ಷಿಸಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು. |