ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಭಕ್ತರಿಗೆ ಗಂಗಾಜಲ - ಸಿದ್ದರಾಮಯ್ಯ ಆಕ್ರೋಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭಕ್ತರಿಗೆ ಗಂಗಾಜಲ - ಸಿದ್ದರಾಮಯ್ಯ ಆಕ್ರೋಶ
ಕಾಂಗ್ರೆಸ್ ಹೈಕಮಾಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ನೀಡುವ ಬಗ್ಗೆ ಭರವಸೆ ಇದೆ. ಆದರೆ ಈ ಬಗ್ಗೆ ತಮಗೆ ಯಾವುದೇ ನಿರೀಕ್ಷೆ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಹೈಕಮಾಂಡ್ ಭೇಟಿಯ ಸಂದರ್ಭದಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ. ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು. ನಾನು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಸರ್ಕಾರ ಶಿವರಾತ್ರಿಯಂದು ಶಿವ ದೇವಾಲಯಗಳಲ್ಲಿ ಗಂಗಾತೀರ್ಥ ಹಂಚಿಕೆ ಮಾಡಲು ಮುಂದಾಗಿರುವುದು ಖಂಡನೀಯ. ಜಾತ್ಯತೀತ ಸರ್ಕಾರ ಇಂತಹ ಕಾರ್ಯಕ್ಕೆ ಕೈ ಹಾಕುವುದು ಸರಿಯಲ್ಲ. ಇದರಿಂದ ಜಾತ್ಯತೀತ ತತ್ವ, ಸಮಾಜ ನಿರ್ಮಾಣಕ್ಕೆ ಅಪಚಾರ ಎಸಗಿದತಾಗುತ್ತದೆ. ಬೇರೆ ಧರ್ಮದವರ ಭಾವನೆಗಳನ್ನು ಕೆರಳಿಸುವಂತಹ ಪ್ರಯತ್ನ ಇದಾಗಿದೆ ಎಂದರು.

ರಾಜ್ಯ ಸರ್ಕಾರ ಹಣಕಾಸು ಸ್ಥಿತಿಯನ್ನು ಹದಗೆಡಿಸಿದೆ. ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿದೆ. ನಿರೀಕ್ಷಿತ ಆದಾಯ ಸಂಗ್ರಹವಾಗದೆ ಸಾಲ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.ಇದರಿಂದಾಗಿ ಬಜೆಟ್ ಆಶಾದಾಯಕವಾಗಿರುತ್ತದೆ ಎಂಬ ನಂಬಿಕೆ ತಮಗಿಲ್ಲ ಎಂದು ಅವರು ಹೇಳಿದರು. ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲವೆಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಧಿಕಾ ಹಣದ ಮೂಲ: ಸಿಬಿಐ ತನಿಖೆಗೆ ಆಗ್ರಹ
ಹೈಕೋರ್ಟ್ ಕಲಾಪಕ್ಕೆ ಸಿಬ್ಬಂದಿ ಬಹಿಷ್ಕಾರ
ಹುಕ್ಕೇರಿಯಲ್ಲಿ ಸ್ಫೋಟಕ ಪತ್ತೆ
ಅಧಿವೇಶನ: ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ
ಐಟಿ-ಬಿಟಿಗೆ ಹೆಚ್ಚಿನ ನೆರವು: ಯಡಿಯೂರಪ್ಪ
ಬಳ್ಳಾರಿ : ಭೀಕರ ಅಪಘಾತಕ್ಕೆ 15 ಬಲಿ