ಬಳ್ಳಾರಿಯಲ್ಲಿ ರೈತರ ಮೇಲೆ ಲಾಠಿ ಪ್ರಹಾರ ನಡೆಯಲು ಸಚಿವ ಜನಾರ್ದನ ರೆಡ್ಡಿ ಕಾರಣ ಎಂದು ಆರೋಪಿಸಿದ ಜೆಡಿಎಸ್ ವಿದ್ಯಾರ್ಥಿ ಘಟಕದ ಸದಸ್ಯರು ನಗರದ ಭಾರತೀಯ ವಿದ್ಯಾ ಭವನದ ಬಳಿಕಯ ರೆಡ್ಡಿ ನಿವಾಸಕ್ಕೆ ನುಗ್ಗಿ ಪ್ರತಿಭಟಿಸಲು ಯತ್ನಿಸಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಗಣಿಧಣಿಗಳ ಒತ್ತಡಕ್ಕೆ ಮಣಿದು ಸರ್ಕಾರ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿದೆ ಎಂದು ಪ್ರತಿಭಟನಾಕಾರರು ದೂರಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು 15ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಿದರು.
ಪ್ರತಿಭಟನಾಕಾರರ ವರ್ತನೆಯಿಂದ ಬೇಸತ್ತ ಅಪಾರ್ಟ್‌ಮೆಂಟ್‌ನ ಇತರ ನಿವಾಸಿಗಳು ಹಾಗೂ ಜನಾರ್ದನ ರೆಡ್ಡಿ ಅವರ ಬೆಂಬಲಿಗರು ರೇಸ್‌ಕೋರ್ಸ್ ರಸ್ತೆಯ ಹಿಂಭಾಗದ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಿದರು. ನಂತರ ಪೊಲೀಸರು ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. |