ವಿವಾದಿತ ಹೊಗೇನಕಲ್ ಯೋಜನೆ ಕುರಿತಂತೆ ತಮಿಳುನಾಡಿನ ವಿರುದ್ಧ ಕೇಂದ್ರ ಸರ್ಕಾರಕ್ಕೆ ದೂರು ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ ಮುಗಿದ ಬಳಿಕ ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ರಾಜ್ಯದ ಆಕ್ಷೇಪ ಸಲ್ಲಿಸಲಾಗುವುದು. ಇದಕ್ಕೂ ಮುನ್ನ ರಾಜ್ಯದ ಪರ ವಾದ ಮಂಡಿಸುತ್ತಿರುವ ವಕೀಲರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.ಹಿಂದೆ ಹೊಗೇನಕಲ್ ಕಾಮಗಾರಿ ಆರಂಭಿಸದಂತೆ ರಾಜ್ಯ ಸರ್ಕಾರ ಒತ್ತಡ ತಂದಾಗ ಕೇಂದ್ರ ಸರ್ಕಾರ ತಮಿಳುನಾಡಿಗೆ ನೋಟಿಸ್ ನೀಡಿತ್ತು. ಆದರೆ ವಿರೋಧವಿದ್ದರೂ ತಮಿಳುನಾಡು ಕೇಂದ್ರದ ಮೇಲೆ ಮತ್ತೆ ಒತ್ತಡ ಹೇರಿ ಈ ಕಾಮಗಾರಿ ಕೈಗೆತ್ತಿಕೊಳ್ಳಲು ಮುಂದಾಗುತ್ತಿದೆ ಎಂದು ಆರೋಪಿಸಿದರು. |