ನಗರದಲ್ಲಿ ಹಾವಿನ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ 80 ಲಕ್ಷ ಮೌಲ್ಯದ ಹಾವಿನ ವಿಷವನ್ನು ವಶಪಡಿಸಿಕೊಂಡಿದ್ದು ಮತ್ತೊಬ್ಬ ಆರೋಪಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ.
ಆರೋಪಿಗಳು ಅರಣ್ಯ ಪ್ರದೇಶಗಳಲ್ಲಿರುವ ವಿಷದ ಹಾವುಗಳನ್ನು ಹಿಡಿದು ಅವುಗಳಿಂದ ವಿಷವನ್ನು ತೆಗೆದುಕೊಂಡು ಲಕ್ಷಾಂತರ ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹಾವಿನ ವಿಷ ಮಾರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಜಾಲ ಬೀಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದು ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |