ಜೀವನದಲ್ಲಿ ಜಿಗುಪ್ಸೆಗೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ಶಿರಾದಲ್ಲಿ ಗುರುವಾರ ನಡೆದಿದೆ.
ಶಿರಾದ ಮನರುಕುಂಟಿ ಗ್ರಾಮದ ನಿವಾಸಿ ನಾಗೇಶ್ ಎಂಬಾತ ತನ್ನ ಹೆಂಡತಿ ಕಮಲಮ್ಮ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿ, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಾಗೇಶ್ ಪತ್ನಿ ಮತ್ತು ಮಕ್ಕಳನ್ನು ಕೊಂದು ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. |