ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ಮುಂದೆ ಗುಂಪುಗಾರಿಕೆಗೆ ಅವಕಾಶ ಇಲ್ಲ ಎಂದು ರಾಜ್ಯ ಕಾಂಗ್ರೆಸ್‌ನ ನೂತನ ಉಸ್ತುವಾರಿಯಾಗಿರುವ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.
ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಶನಿವಾರ ಆಗಮಿಸಿದ್ದ ಆಜಾದ್ ಸುದ್ದಿಗಾರರೊಂದಿಗೆ ಮಾತನಾಡುತ್ತ, ಸಂಸತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನಿಯೋಗದ ಒತ್ತಡದಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಮುದಾಯ ಒಪ್ಪುವ, ಸಶಕ್ತರು, ಅರ್ಹರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಹೇಳಿದರು. ಅಲ್ಲದೇ ಕಾರ್ಯಕರ್ತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಆಜಾದ್ ಅವರು ಎರಡು ದಿನಗಳ ಕಾಲ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದು, ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಅಖೈರುಗೊಳಿಸಲಿದ್ದಾರೆ. |