ಬೆಂಗಳೂರಿನಲ್ಲಿ ವಸತಿ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಬಿಡಿಎ ನಿರ್ಮಿಸಲು ಹೊರಟಿರುವ 3 ಹೊಸ ಬಡಾವಣೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಶನಿವಾರ ಒಪ್ಪಿಗೆ ನೀಡಿದೆ.
ಬೆಂಗಳೂರು ಪೂರ್ವ ತಾಲೂಕಿನ ವರ್ತೂರು ಮತ್ತು ಗುಂಜೂರಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕೆ.ಸಿ.ರೆಡ್ಡಿ, ಡಿ.ದೇವರಾಜು ಅರಸು ಮತ್ತು ನಿಜಲಿಂಗಪ್ಪ ಅವರ ಹೆಸರಿನಲ್ಲಿ ಬಿಡಿಎ ಬೃಹತ್ ಬಡಾವಣೆಗಳನ್ನು ನಿರ್ಮಿಸಲು ಉದ್ದೇಶಿಸಿದ್ದು ಈ ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಕೆ.ಸಿ.ರೆಡ್ಡಿ ಬಡಾವಣೆಯನ್ನು 2134 ಎಕರೆ ವ್ಯಾಪ್ತಿಯಲ್ಲಿ, ಡಿ.ದೇವರಾಜು ಅರಸು ಬಡಾವಣೆಯನ್ನು 1976 ಎಕರೆ ಹಾಗೂ ನಿಜಲಿಂಗಪ್ಪ ಬಡಾವಣೆಯನ್ನು 2806 ಎಕರೆ ಪ್ರದೇಶದಲ್ಲಿ ನಿರ್ಮಿಸಲು ಬಿಡಿಎ ಉದ್ದೇಶಿಸಿದೆ. |