ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿರುವ ಪ್ರದೇಶ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್‌ಗೆ ರವಾನಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಧರಂಸಿಂಗ್, ಎಸ್.ಬಂಗಾರಪ್ಪ. ವಿಧಾನಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ಅಂಬರೀಷ್ ಪಟ್ಟಿಯಲ್ಲಿರುವ ಅಭ್ಯರ್ಥಿಗಳಲ್ಲಿ ಪ್ರಮುಖರು.
ನಗರದ ಹೊರ ವಲಯದ ರೆಸಾರ್ಟ್‌ನಲ್ಲಿ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ನಡೆದ ಪ್ರಮುಖರ ಸಭೆಯಲ್ಲಿ ಪ್ರತಿ ಕ್ಷೇತ್ರಕ್ಕೆ ಎರಡು ಅಥವಾ ಮೂವರ ಹೆಸರು ಸೂಚಿಸಲಾಗಿದೆ. ಗುಲಾಂ ನಬಿ ಅಜಾದ್ ಸಾರಥ್ಯದಲ್ಲಿ ನಡೆದ ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭಾಗವಹಿಸಿದ್ದರು.
ದಿಲ್ಲಿಯಲ್ಲಿ ಹೈಕಮಾಂಡ್ ಪರಿಶೀಲನೆ ನಡೆಸಿದ ಬಳಿಕ ಕೇಂದ್ರ ಚುನಾವಣೆ ಸಮಿತಿ ಸಭೆಯಲ್ಲಿ ಪಟ್ಟಿಗೆ ಅಂತಿಮ ಸ್ವರೂಪ ಸಿಗಲಿದೆ. ವಾರದೊಳಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.
ಈ ಬಾರಿ ಅಂಬರೀಷ್ ಅವರು ಮೈಸೂರಿನಿಂದ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಆರ್.ವಿ.ದೇಶಪಾಂಡೆ ಅವರ ಪುತ್ರ ಪ್ರಶಾಂತ್ ದೇಶಪಾಂಡೆ ಉತ್ತರ ಕನ್ನಡ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾಗಿದ್ದಾರೆ. |