ರಾಜ್ಯದಲ್ಲಿ ಕಾಂಗ್ರೆಸ್ ಹಿನ್ನೆಡೆ ಅನುಭವಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದಾಗಿ ಕಾಂಗ್ರೆಸ್ ಹಿನ್ನೆಡೆ ಸಾಧಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಕಿಡಿಕಾರಿದ್ದಾರೆ.
ಚನ್ನಪಟ್ಟಣದಲ್ಲಿ ಭಾನುವಾರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶಾಸಕನಾಗಿ ಮೂರು ಬಾರಿ ಗೆದ್ದರೂ ಕಾಂಗ್ರೆಸ್‌ನಲ್ಲಿ ಹಿಂಸೆ, ನೋವು ಅನುಭವಿಸುತ್ತಿರುವುದಾಗಿ ಹೇಳಿದರು.
ಶಾಸಕ ಯೋಗೇಶ್ವರ್ ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ಸುಳಿವು ದೊರೆತ ನಂತರ ಕಾರ್ಯಕರ್ತರು ಬಿಜೆಪಿಗೆ ಸೇರುವುದು ಬೇಡವೆಂದು ಭಾಷಣಕ್ಕೆ ಅಡ್ಡಿಪಡಿಸಿದರು. ಹೀಗಾಗಿ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಕಳೆದ ಸಮ್ಮಿಶ್ರ ಸರಕಾರದಲ್ಲಿ ತಮಗೆ ದೊರೆತಿದ್ದ ಮಂತ್ರಿಗಾದಿಯನ್ನು ಶಿವಕುಮಾರ್ ತಪ್ಪಿಸಿದರು ಎಂದು ದೂರಿದರು.
ಡಿ.ಕೆ.ಶಿವಕುಮಾರ್ ಅವರ ಸೇಡಿನ ರಾಜಕಾರಣದಿಂದಾಗಿ ಕಾಂಗ್ರೆಸ್ ನೆಲಕಚ್ಚುವಂತಾಗಿದೆ ಎಂದು ಯೋಗೇಶ್ವರ್ ಗಂಭೀರವಾಗಿ ಆರೋಪಿಸಿದರು. |