ಕಳೆದ ಒಂಬತ್ತು ತಿಂಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಚಿತ್ರಣ ಬದಲಾಗುವ ರೀತಿಯಲ್ಲಿ ಅಭಿವೃದ್ದಿ ಕಾರ್ಯ ಕೈಗೊಂಡಿದ್ದು, ಇದಕ್ಕೆ ಯಾರ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಸುಮಾರು 200ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾರುತಿ ನಗರದಲ್ಲಿ ಉದ್ಘಾಟಿಸಿ ಮಾತನಾಡಿ, ನಿರಂತರ ಅಭಿವೃದ್ಧಿ ಕಾಮಗಾರಿಗಳಿಂದ ಬರುವ ದಿನಗಳಲ್ಲಿ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯುವುದಾಗಿ ಹೇಳಿದರು.
ಆರ್ಥಿಕ ಹಿಂಜರಿತದ ಭಾರಿ ಪರಿಣಾಮವನ್ನು ರಾಜ್ಯ ಎದುರಿಸಿದ್ದು, ಕಳೆದ ವರ್ಷ ಖಜಾನೆಗೆ 5ಸಾವಿರ ಕೋಟಿ ಕೊರತೆಯುಂಟಾಗಿದೆ. ಆದರೂ ಯಾರಿಗೂ ದ್ರೋಹ ಮಾಡದೇ ಎಲ್ಲಾ ವರ್ಗದ ಜನರಿಗೆ ಬಜೆಟ್‌ನಲ್ಲಿ ಹಣ ಹಂಚಿಕೆ ಮಾಡಲಾಗಿದೆ ಎಂದರು.
ರಾಜ್ಯದ ಅಭಿವೃದ್ಧಿಯಲ್ಲಿ ಯಾರಿಗೂ ತುಪ್ಪ ಸವರಿ ಪ್ರಚಾರ ಪಡೆಯುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. |