ಮುಂಬರುವ ಲೋಕಸಭಾ ಚುನಾವಣೆಗೆ ವೇದಿಕೆ ಸಿದ್ದಗೊಂಡಿದ್ದು, ಸಬ್ ಇನ್ಸ್ಪೆಕ್ಟರ್‌ಗಿಂತ ಮೇಲ್ಪಟ್ಟ ಅಧಿಕಾರಿಗಳಿಗೆ ಚುನಾವಣಾ ನೀತಿ ಸಂಹಿತೆಯ ಕುರಿತು ತರಬೇತಿ ನೀಡಲಾಗುವುದು ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ.
ಯಾವ ಕಾನೂನನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಬಗ್ಗೆ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಕಳೆದ ಚುನಾವಣೆಯಲ್ಲಿ ಜಾರಿಯಲ್ಲಿದ್ದ ಆಯೋಗದ ಸಹಾಯವಾಣಿ ಈಗ ಆಧುನೀಕರಣಗೊಂಡಿದ್ದು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ವಿವರಗಳನ್ನು ಒಂದೇ ಕೊಠಡಿಯಲ್ಲಿ ಕುಳಿತು ವೀಕ್ಷಿಸಬಹುದು ಎಂದು ಚುನಾವಣಾಧಿಕಾರಿ ವಿದ್ಯಾಶಂಕರ್ ತಿಳಿಸಿದರು.
ಸಾರ್ವಜನಿಕರು ಹಾಗೂ ರಾಜಕಾರಣಿಗಳಿಂದ ಮಾಹಿತಿ ಪಡೆಯಲು ಪೊಲೀಸ್ ಇಲಾಕೆ ಹಾಗೂ ಚುನಾವಣಾ ಆಯೋಗ ಸಹಾಯವಾಣಿಗಳನ್ನು ಆರಂಭಿಸಲಿದೆ. ಮೊದಲಿಗೆ ಪೊಲೀಸ್ ನಿಯಂತ್ರಣ ಕೊಠಡಿ ದೂ. 100ಕ್ಕೆ ಕರೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ ಕುರಿತು ತಿಳಿಸಬಹುದು ಎಂದರು. |