ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಪೋಟಾ ಕಾಯ್ದೆಯನ್ನು ಮತ್ತೆ ಜಾರಿ ಮಾಡುವುದಾಗಿ ಪಕ್ಷದ ಮುಖಂಡ ವೆಂಕಯ್ಯ ನಾಯ್ಡು ಭರವಸೆ ನೀಡಿದ್ದಾರೆ.ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಪೋಟಾ ಕಾಯ್ದೆಯನ್ನು ಜಾರಿ ಮಾಡುವುದು ನಿಶ್ಚಿತ ಎಂದು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.ತೃತೀಯ ರಂಗ ಥರ್ಡ್ ಕ್ಲಾಸ್:ತಮ್ಮ ಮಾತಿನುದ್ದಕ್ಕೂ ತೃತೀಯ ರಂಗದ ವಿರುದ್ಧ ಹರಿಹಾಯ್ದ ನಾಯ್ಡು, ತೃತೀಯ ರಂಗ ತೃತೀಯ ದರ್ಜೆಯದ್ದು ಎಂದು ಟೀಕಿಸಿರುವ ಅವರು, ಮಾಜಿ ಪ್ರಧಾನಿ ದೇವೇಗೌಡರ ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದರು.ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಸ್ತಿತ್ವವೇ ಇಲ್ಲ ಎಂದು ಜರೆದಿರುವ ನಾಯ್ಡು, ಉತ್ತರ ಪ್ರದೇಶದ ಮಾಯಾವತಿ ಮಾಯವಾಗಿದ್ದಾರೆ ಎಂದು ಲೇವಡಿ ಮಾಡಿದರು.ಆ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಗೆಲುವು ಸಾಧಿಸುವ ವಿಶ್ವಾಸ ಹೊಂದಿರುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದರು. |