ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸ್ಥಾನಮಾನಕ್ಕಾಗಿ ಕೆಲಸ ಮಾಡ್ತಿಲ್ಲ: ಸಿದ್ದರಾಮಯ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸ್ಥಾನಮಾನಕ್ಕಾಗಿ ಕೆಲಸ ಮಾಡ್ತಿಲ್ಲ: ಸಿದ್ದರಾಮಯ್ಯ
ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ದೊರಕಿಲ್ಲ ಎಂದು ಚುನಾವಣಾ ಪ್ರಚಾರ ಕಾರ್ಯದಿಂದ ದೂರ ಉಳಿದಿದ್ದ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಲೋಕಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದು, ತಾನು ಸ್ಥಾನ-ಮಾನಕ್ಕಾಗಿ ಕೆಲಸ ಮಾಡ್ಲಿಲ್ಲ ಎಂದು ಸಮಜಾಯಿಷಿಕೆ ನೀಡಿದ್ದಾರೆ.

ಬುಧವಾರ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರಕ್ಕೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಯಾವುದೇ ನಿರೀಕ್ಷೆ ಇಟ್ಟುಕೊಂಡು ಪಕ್ಷದಲ್ಲಿ ಕೆಲಸ ಮಾಡುತ್ತಿಲ್ಲ. ಮೊದಲು ಮೈಸೂರು, ಚಾಮರಾಜನಗರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ, ಬಳಿಕ ರಾಜ್ಯದ ವಿವಿಧೆಡೆ ತೆರಳುವುದಾಗಿ ಹೇಳಿದರು.

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯನವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಸಿದ್ದರಾಮಯ್ಯನವರು ಪ್ರಚಾರ ಕಾರ್ಯ, ಕಾಂಗ್ರೆಸ್ ಕಾರ್ಯಕ್ರಮಗಳಿಗೆ ಗೈರು ಹಾಜರಾಗುತ್ತಿದ್ದರು. ಅವೆಲ್ಲಕ್ಕೂ ಪೂರಕ ಎಂಬಂತೆ ಸಿದ್ದರಾಮಯ್ಯನವರು ಶೀಘ್ರವೇ ನೂತನ ಪಕ್ಷ ರಚಿಸಲಿದ್ದಾರೆ ಎಂಬ ಸ್ಫೋಟಕ ಸುದ್ದಿಯನ್ನೂ ಆಪ್ತರು ಘೋಷಿಸಿದ್ದರು.

ಆದರೆ ಸಿದ್ದರಾಮಯ್ಯನವರು ಅವೆಲ್ಲವನ್ನು ತಳ್ಳಿಹಾಕಿ,ತಾನು ಕಾಂಗ್ರೆಸ್ಸಿನಲ್ಲಿಯೇ ಇದ್ದೇನೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡುತ್ತಿದ್ದರು. ಇತ್ತೀಚೆಗೆಷ್ಟೇ ಸಿದ್ದರಾಮಯ್ಯನವರಿಗೆ ಪ್ರತಿಪಕ್ಷ ನಾಯಕ ಪಟ್ಟ ನೀಡಿ, ಮಲ್ಲಿಕಾರ್ಜುನ ಖರ್ಗೆಯವರಿಗೆ ಲೋಕಸಭೆ ಟಿಕೆಟ್ ನೀಡುವುದು ಎಂಬ ಮಾತುಕತೆ ನಡೆದಿತ್ತು. ಅದಕ್ಕೆ ಖರ್ಗೆ ಬೆಂಬಲಿಗರಿಂದ ಸಾಕಷ್ಟು ವಿರೋಧವೂ ವ್ಯಕ್ತವಾಗಿತ್ತು. ಒಟ್ಟಾರೆ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯನವರ ಸ್ಥಾನಮಾನ ಏನು ಎಂಬುದು ಇನ್ನೂ ಖಚಿತವಾಗಿಲ್ಲ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಲಬೆರಕೆ ರಾಗಿ: ಶಾಸಕರಿಂದ ಅಹೋರಾತ್ರಿ ಪ್ರತಿಭಟನೆ
ಗಣಿ ವಿಚಾರದಲ್ಲಿ ಗೌಡರು ರಾಜಕೀಯ ಮಾಡ್ತಿದ್ದಾರೆ: ಸಿಎಂ
ವರ್ಣರಂಜಿತ ಅಮೃತಮಹೋತ್ಸವಕ್ಕೆ ತೆರೆ
ಬಿಜೆಪಿ ಅಧಿಕಾರಕ್ಕೇರಿದರೆ ಪೋಟಾ ಜಾರಿ: ವೆಂಕಯ್ಯ ನಾಯ್ಡು
ನೀತಿ ಸಂಹಿತೆ ಬಗ್ಗೆ ಪೊಲೀಸರಿಗೆ ತರಬೇತಿ
ಅಪರಾಧಿಗಳ ಸ್ಪರ್ಧೆಗೆ ಅವಕಾಶವಿಲ್ಲ: ಚು. ಆಯೋಗ